BengaluruCrime

ಮೈಸೂರು ಬಳಿ ಭೀಕರ ಅಪಘಾತ; 10 ಮಂದಿ ದುರ್ಮರಣ

ಮೈಸೂರು; ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಕಾರೊಂದು ಬಸ್ ಗೆ ಡಿಕ್ಕಿ ಹೊಡೆದದ್ದು 10 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಟಿ.ನರಸೀಪುರದ ಕುರುಬೂರು ಬಳಿ ನಡೆದಿದೆ. ಮೃತರೆಲ್ಲರೂ ಬಳ್ಳಾರಿ ಮೂಲದವರಾಗಿದ್ದು, ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

ಇನ್ನು ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1 ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಟ್ವೀಟ್ ಮಾಡಿದ್ದಾರೆ.

ಎಲ್ಲರೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಮೈಸೂರು ನೋಡಿದ ನಂತರ, ಬಿಆರ್ ಹಿಲ್ಸ್ ಗೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಬಿಳ್ಯಾಳ ಮಂಜುನಾಥ್ (35), ಇವರ ಪತ್ನಿ ಪೂರ್ಣಿಮಾ (30), ಮಗ ಪವನ (10), ಕಾರ್ತಿಕ (08), ಸಂದೀಪ (24), ತಾಯಿ ಸುಜಾತ ( 40), ತಂದೆ ಕೊಟ್ರೇಶ್ (45), ಪತ್ನಿ ಗಾಯತ್ರಿ (35), ಮಗಳು ಶ್ರಾವ್ಯ ( 03) ಹಾಗೂ ಇನೋವಾ ಚಾಲಕ ಮೈಸೂರಿನ ಆದಿತ್ಯ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

 

Share Post