ಅಕ್ರಮ ಆಸ್ತಿ ಗಳಿಕೆ; ಕೆಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅರೆಸ್ಟ್
ಬೆಂಗಳೂರು; ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಕೆಆರ್ ಪುರಂ ತಹಸೀಲ್ದಾರ್ ಅಜಿತ್ ರೈರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬೆಳಗ್ಗೆಯಿಂದ ಅವರ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ತಹಸೀಲ್ದಾರ್ ಅಜಿತ್ ರೈ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಅನ್ನೋದು ಗೊತ್ತಾಗಿತ್ತು. ಲಭ್ಯವಾದ ದಾಖಲೆಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.
ಅಜಿತ್ ರೈಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ನಿನ್ನೆಯಿಂದ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ 40 ಲಕ್ಷ ರೂಪಾಯಿ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್ಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. ಸಂಬಂಧಿಕರು, ಸ್ನೇಹಿತರ ಹೆಸರುಗಳಲ್ಲೂ ಆಸ್ತಿ ಮಾಡಿದ್ದು, ಆ ಆಸ್ತಿ ಪತ್ರಗಳೆಲ್ಲಾ ಲೋಕಾಯುಕ್ತ ಪೊಲೀಸರಿಗೆ ಶೋಧ ಕಾರ್ಯಾಚರಣೆ ವೇಳೆ ಸಿಕ್ಕಿವೆ ಎಂದು ಹೇಳಲಾಗುತ್ತಿದೆ.