Bengaluru

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಪ್ರಾಥಮಿಕ ವರದಿ ನಂತರವೇ ಕ್ರಮ – ಸಿಎಂ ಬೊಮ್ಮಾಯಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಪ್ರಕರಣದ ಪ್ರಾಥಮಿಕ ತನಿಖೆ ವರದಿ ಬಂದ ಬಳಿಕವೇ ಮುಂದಿನ ಕ್ರಮ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ವರದಿ ಬರುವವರೆಗೂ ಯಾವುದೇ ಕ್ರಮವಿಲ್ಲ. ಈ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.

ಸಚಿವ ಕೆ.ಎಸ್‌. ಈಶ್ವರಪ್ಪ ರಾಜೀನಾಮೆಗೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆಯೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ವರಿಷ್ಠರು ಪ್ರಕರಣದ ಕುರಿತು ಮಾಹಿತಿ ಪಡೆದಿದ್ದಾರೆ. ಆದರೆ, ಯಾವುದೇ ಸೂಚನೆ, ನಿರ್ದೇಶನ ನೀಡಿಲ್ಲ ಎಂದರು. ಕಾಂಗ್ರೆಸ್‌ ಪಕ್ಷದವರಿಗೆ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಅವರ ಸರ್ಕಾರದ ಅವಧಿಯಲ್ಲಿ ಎಷ್ಟು ಕೊಲೆಗಳಾಗಿದ್ದವು ಎಂಬುದು ಗೊತ್ತಿದೆ. ಈಗ ರಾಜಕೀಯ ಲಾಭಕ್ಕಾಗಿ ಸಂತೋಷ್‌ ಆತ್ಮಹತ್ಯೆ ಪ್ರಕರಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

Share Post