BengaluruCinemaHealth

ನಟ ಉಪೇಂದ್ರ ಗೆ ಉಸಿರಾಟದ ಸಮಸ್ಯೆ; ಚಿತ್ರೀಕರಣದ ವೇಳೆ ಏನಾಯ್ತು..?

ಬೆಂಗಳೂರು; ಸ್ಯಾಂಡಲ್‌ವುಡ್‌ ನಟ, ಸೂಪರ್‌ಸ್ಟಾರ್‌ ಉಪೇಂದ್ರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೆಲಕಾಲ ಶೂಟಿಂಗ್‌ ಸೆಟ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಅವರನ್ನು ನೆಲಮಂಗಲದ ಹರ್ಷಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ನಂತರ ಅವರು ಎಂದಿನಂತೆ ಲವಲವಿಕೆಯಿಂದ ಇದ್ದು, ಚಿತ್ರೀರಣದಲ್ಲಿ ಪಾಲ್ಗೊಂಡಿದ್ದಾರೆ.

ಉಪೇಂದ್ರ ಅವರು ʻಯುಐʼ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಉಸಿರಾಟದಲ್ಲಿ ಸಮಸ್ಯೆಯಾಗಿದೆ. ನೆಲಮಂಗಲದ ಮೋಹನ್‌ ಬಿ ಕೆರೆ ಸ್ಟುಡಿಯೋದಲ್ಲಿ ಶೂಟಿಂಗ್‌ ವೇಳೆ ಈ ಘಟನೆ ನಡೆದಿದೆ. ಕೂಡಲೇ ಅವರನ್ನು ಹತ್ತಿರವೇ ಇದ್ದ ಹರ್ಷಾ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಪಡೆದು ಕೆಲ ಹೊತ್ತು ಸುಧಾರಿಸಿಕೊಂಡ ನಂತರ ಅವರು ಚಿತ್ರೀಕರಣ ಸ್ಥಳಕ್ಕೆ ತೆರಳಿದರು. ಅನಂತರ ಫೇಸ್‌ಬುಕ್‌ ಲೈವ್‌ ಬಂದ ಅವರು, ನಾನು ಶೂಟಿಂಗ್‌ ಸ್ಥಳದಲ್ಲಿದ್ದೇನೆ. ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

 

Share Post