ನೇಮಕಾತಿ ಅಕ್ರಮ; ಮಾಜಿ ಸಿಎಂ ಪುತ್ರನ ವಿರುದ್ಧ ದೂರು
ಬೆಂಗಳೂರು; ಪಿಎಸ್‌ಐ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್‌ಗಳ ನೇಮ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರನ ಕೈವಾಡವಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಕೀಲ ಎ.ಪಿ.ರಂಗನಾಥ್ ಸಿಐಡಿ ಎಡಿಜಿಪಿಗೆ ದೂರು ನೀಡಿದ್ದಾರೆ.
ಮಾಜಿ ಸಿಎಂ ಪುತ್ರ ಹಾಗೂ ಸಚಿವ ಡಾ.ಅಶ್ವತ್ಥನಾರಾಯಣ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ವಕೀಲ ಎ.ಪಿ.ರಂಗನಾಥ್ ದೂರಿನಲ್ಲಿ ಮನವಿ ಮಾಡಿದ್ದಾರೆ. ೬೩ ಅಭ್ಯರ್ಥಿಗಳಿಂದ ಹಣ ಪಡೆದು ಕೆಲಸ ಮಾಡಿಸಿಕೊಟ್ಟಿಲ್ಲ. ಒಬ್ಬೊಬ್ಬ ಅಭ್ಯರ್ಥಿಯಿಂದ ೫೦ ರಿಂದ ೭೦ ಲಕ್ಷ ರೂಪಾಯಿ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.