ಪ್ರಜ್ವಲ್ ರೇವಣ್ಣ ಅನರ್ಹ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣಗೂ ಕಾನೂನು ಸಂಕಷ್ಟ
ಬೆಂಗಳೂರು; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದಾಗಿ ಮೂರು ದಿನಗೂ ಕಳೆದಿಲ್ಲ. ಆಗಲೇ ಮಾಜಿ ಸಚಿವ ರೇವಣ್ಣ ಅವರಿಗೂ ಕಾನೂನು ಸಂಕಷ್ಟ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಶಾಸಕ ಹೆಚ್.ಡಿ.ರೇವಣ್ಣ ಹಾಗೂ ಅವರ ವಿರುದ್ಧ ಸ್ಪರ್ಧಿಸಿದ್ದ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡಿದೆ.
ವಿಧಾನಸಭಾ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ನೀಡಿತ್ತು. ಅದರಂತೆ ಈಗ ರೇವಣ್ಣ ಹಾಗೂ ಇತರರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ರೇವಣ್ಣ ವಿರುದ್ಧ ಸ್ಪರ್ಧೆ ಮಾಡಿ ಸೋತಿದ್ದ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಅವರು, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಶಾಸಕರಾಗಿ ಹೆಚ್.ಡಿ.ರೇವಣ್ಣ ಆಯ್ಕೆ ಅಸಿಂಧು ಕೋರಿ ಈ( ಅರ್ಜಿ ಸಲ್ಲಿಕೆ ಮಾಡಲಾಗಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸಮನ್ಸ್ ಜಾರಿ ಮಾಡಿದೆ.