Bengaluru

ನನ್ನ ವಿರುದ್ಧದ ಆರೋಪಗಳೆಲ್ಲಾ ಸುಳ್ಳು; ಟ್ವೀಟ್‌ ಮೂಲಕ ಜಮೀರ್‌ ಸ್ಪಷ್ಟನೆ

ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿ ಅರೆಸ್ಟ್ ಆದವರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್‌ಖಾನ್ ನೆರವು ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.  ಗಲಭೆಕೋರ ಕುಟುಂಬಗಳಿಗೆ ರಂಜಾಬ್‌ ಹಬ್ಬಕ್ಕೆ ಸಹಾಯವಾಗಲೆಂದು ತಲಾ 5 ಸಾವಿರ ನಗದು ಹಾಗೂ ರಂಜಾನ್ ಫುಡ್‌ಕಿಟ್ ನೀಡಿ ಸಹಾಯ ಮಾಡಿದ್ದಾರೆ ಎಂದು ಕೆಲವರು ದೂರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ.

ಏಪ್ರಿಲ್ 17ನೇ ತಾರೀಖಿನಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮೆಕ್ಕಾಗೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ. ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಟ್ವೀಟ್‌ನಲ್ಲಿ ಜಮೀರ್‌ ಸ್ಪಷ್ಟನೆ ನೀಡಿದ್ದಾರೆ.

Share Post