BengaluruPolitics

ಜೆಡಿಎಸ್‌ ಜೊತೆ ಮೈತ್ರಿಗೆ ಮಾತುಕತೆ ನಡೆದಿದೆ; ಯಡಿಯೂರಪ್ಪ

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮೈತ್ರಿ ಸಂಬಂಧ ಎರಡೂ ಪಕ್ಷದ ವರಿಷ್ಠರು ಮಾತನಾಡಿದ್ದಾರೆ ಎಂದು ಹೇಳಿದ್ಧಾರೆ.

ನಮ್ಮ ಪಕ್ಷದ ಹಿರಿಯರು ಜೆಡಿಎಸ್‌ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿಯೋದು ನಿಶ್ಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡರೆ ನಮಗೆ ಮತ್ತಷ್ಟು ಬಲ ಸಿಗಲಿದೆ. ಜೆಡಿಎಸ್‌ಗೆ ನಾಲ್ಕು ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಮಾತುಕತೆ ನಡೆದಿದೆ. ನಮ್ಮ ಮೈತ್ರಿಕೂಟಕ್ಕೆ ರಾಜ್ಯದಲ್ಲಿ 26 ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಯಡಿಯೂರಪ್ಪ ಇದೇ ವೇಳೆ ಹೇಳಿದ್ದಾರೆ.

 

Share Post