Bengaluru

ರಾಜಭವನದಲ್ಲಿ ಅಂಬೇಡ್ಕರ್‌ ಪುತ್ಥಳಿ ಅನಾವರಣ

ಬೆಂಗಳೂರು; ಬೆಂಗಳೂರಿನ ರಾಜಭವನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನಾವರಣಗೊಳಿಸಿದರು. ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಅನಾವರಣ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನಸಭಾ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಪರಿಷತ್‌ ಹಂಗಾಮಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ರಾಜ್ಯ ಸರ್ಕಾರದ ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

Share Post