ಲಿಂಗಾಯತ ವಿಚಾರ ಚಾಲ್ತಿಯಲ್ಲಿಡಲು ರಾಜ್ಯ ನಾಯಕರಿಗೆ ಅಮಿತ್ ಶಾ ಸೂಚನೆ..?
ಬೆಂಗಳೂರು; ಬಿಜೆಪಿಯವರು ಲಿಂಗಾಯತರನ್ನು ಕಡೆಗಣಿಸಿದ್ದಾರೆ ಎಂದು ಹೇಳೋ ಮೂಲಕ ಲಿಂಗಾಯತ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಪ್ರಯತ್ನಿಸ್ತಿದೆ. ಈ ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಬಿಜೆಪಿ ಭಾರಿ ತಂತ್ರಗಾರಿಕೆಯನ್ನೇ ಮಾಡಲು ಹೊರಟಿದೆ. ನಿನ್ನೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಉಯಕ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರ ಜೊತೆ ಗಂಭೀರ ಚರ್ಚೆ ನಡೆಸಿದ್ದು, ಲಿಂಗಾಯತರಿಗೆ ಹೆಚ್ಚು ಪ್ರಾಶಸ್ತ್ಯ ಕೊಟ್ಟಿರುವುದು ಬಿಜೆಪಿಯೇ ಎಂಬುದನ್ನು ಚುನಾವಣೆ ಮುಗಿಯುವವರೆಗೂ ಬಿಂಬಿಸಬೇಕೆಂದು ರಾಜ್ಯ ನಾಯಕರು ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಬಾರಿ ವಯಸ್ಸಿನ ಕಾರಣಕ್ಕಾಗಿ ಬಿಜೆಪಿ ಹಲವರಿಗೆ ಟಿಕೆಟ್ ನಿರಾಕರಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಾಂಗ್ರೆಸ್, ಲಿಂಗಾಯತ ನಾಯಕರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂದು ಆರೋಪಿಸುವ ಮೂಲಕ ಲಿಂಗಾಯತ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಈ ಕಾರಣದಿಂದಾಗಿ, ಬಿಜೆಪಿ, ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿದ್ದು ನಾವೇ ಎಂದು ಹೇಳಿಕೊಳ್ಳಲು ಹೊರಟಿದೆ. ಅಮಿತ್ ಶಾ ರಾಜ್ಯ ನಾಯಕರಿಗೆ ಇದನ್ನೇ ಹೇಳಿದ್ದಾರೆ ಎನ್ನಲಾಗಿದೆ.
ನಾನು ಕೇವಲ ಏಳು ವರ್ಷ ಅಧಿಕಾರ ಮಾಡಿದ್ದೇವೆ. ಇದರಲ್ಲಿ ಮೂವರು ಲಿಂಗಾಯತರಿಗೆ ಸಿಎಂ ಸ್ಥಾನ ನೀಡಿದ್ದೇನೆ. ಒಬ್ಬರಿಗೆ ಡಿಸಿಎಂ ಸ್ಥಾನವನ್ನೂ ನೀಡಿದ್ದೇವೆ ಎಂಬುದನ್ನು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಡಬೇಕೆಂದು ಅಮಿತ್ ಶಾ ರಾಜ್ಯದ ನಾಯಕರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಲಿಂಗಾಯತರ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಆದ್ರೆ ದಶಕಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಲಿಂಗಾಯತರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಿಲ್ಲ. ವೀರೇಂದ್ರ ಪಾಟೀಲರನ್ನು ಹೀನಾಯವಾಗಿ ನಡೆಸಿಕೊಂಡ ಕಾಂಗ್ರೆಸ್, ಒಂಬತ್ತು ತಿಂಗಳಿಗೆಲ್ಲಾ ಆ ಹುದ್ದೆಯನ್ನು ಕಿತ್ತುಕೊಂಡಿದೆ ಎಂದು ಆರೋಪ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.