Bengaluru

ರಾಷ್ಟ್ರೀಯ ಶಿಕ್ಷಣ ನೀತಿ ಪುನರ್‌ ವಿಮರ್ಶೆ ಮಾಡುವ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಮೂಡಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅವರು ಇಂದು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಯಾವುದೇ ಲೋಪ ಆಗಬಾರದು ಅಂತ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ ನೀಡಿದ ಸಿಎಂ, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು‌ ಎಂದರು.  ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಬೇರೆ ಬೇರೆ ಭಾಷೆ, ಸಂಸ್ಕೃತಿಗಳ ಕಾರಣದಿಂದಾಗಿ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

ವಿಶ್ವವಿದ್ಯಾಲಯಗಳ ಕುಲಪತಿಗಳು,  ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಈ ಮೂಲಕ ಸಮ ಸಮಾಜ ನಿರ್ಮಾಣದ ನಿಮ್ಮ ಲಕ್ಷ್ಯ ಇರಬೇಕು ಎಂದು ಸಿಎಂ ಹೇಳಿದರು.

 

Share Post