ಸರ್ಕಾರಿ ನೌಕರರ ಡಿಎ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!
ಬೆಂಗಳೂರು; ಲೋಕಸಭಾ ಚುನಾವಣೆ ಹೊಸ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದನ್ನು ನೀಡಿದೆ. ಇಂದು ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದ್ದಾರೆ.
ತುಟ್ಟಿ ಭತ್ಯೆ ಶೇ.3.75ರಷ್ಟು ಹೆಚ್ಚಳ ಮಾಡಿ ಆದೇಶ;
ತುಟ್ಟಿ ಭತ್ಯೆ ಶೇ.3.75ರಷ್ಟು ಹೆಚ್ಚಳ ಮಾಡಿ ಆದೇಶ; ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 3.75ರಷ್ಟು ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರದ ವೇತನ ನೀತಿಯಂತೆ ಸಂಬಳ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರದ ಈ ಆದೇಶದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪ್ರತಿ ವರ್ಷ 1,792 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಹೊರೆಯಾಗಲಿದೆ.
ಜನವರಿ ತಿಂಗಳಿಗೆ ಇದು ಪೂರ್ವಾನ್ವಯ;
ಜನವರಿ ತಿಂಗಳಿಗೆ ಇದು ಪೂರ್ವಾನ್ವಯ; 2024ರ ಜನವರಿ 1ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆ ಏರಿಕೆ ಆಗುತ್ತದೆ. ಶೇ.38.75 ರಿಂದ ಶೇ.42.5ಕ್ಕೆ ಇದು ಹೆಚ್ಚಳವಾಗುತ್ತದೆ. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.