BengaluruPolitics

ಕೊಪ್ಪಳದಲ್ಲಿ ಕೈ ಅಭ್ಯರ್ಥಿಗಳ ಘೋಷಣೆ ವಿಚಾರ; ಸಿದ್ದರಾಮಯ್ಯಗೆ ಡಿಕೆಶಿ ತಿರುಗೇಟು

ಬೆಂಗಳೂರು; ಕೊಪ್ಪಳದಲ್ಲಿ ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಐದು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರು. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಎಐಸಿಸಿ ಆಯ್ಕೆ ಮಾಡುತ್ತದೆ. ನಾವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಮಾತ್ರ ಕಳುಹಿಸುತ್ತೇನೆ. ಎಐಸಿಸಿಗೆ ಮಾತ್ರ ಅಂತಿಮ ಅಭ್ಯರ್ಥಿಗಳ ಆಯ್ಕೆ ಅಧಿಕಾರ ಇರುತ್ತದೆ. ನನಗೂ ಅಭ್ಯರ್ಥಿಗಳ ಆಯ್ಕೆ ಮಾಡುವ ಅಧಿಕಾರವಿಲ್ಲ. ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಆ ರೀತಿ ಮಾತನಾಡಿದರೋ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಕೊಪ್ಪಳ ತಾಲೂಕಿನ ವಣಬಳ್ಳಾರಿ ಗ್ರಾಮದಲ್ಲಿ ನಿನ್ನೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮದುವೆ ವೇದಿಕೆ ಮೇಲೇ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಸ್ತಾಪ ಮಾಡಿದ್ದರು. ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರಕ್ಕೆ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕ್ವಾಲ್ ಅನ್ಸಾರಿ ಸ್ಪರ್ಧೆ ಮಾಡಲಿದ್ದು, ಅವರಿಗೆ ಮತ ನೀಡುವಂತೆ ಮದುವೆ ಸಮಾರಂಭದಲ್ಲೇ ಸಿದ್ದರಾಮಯ್ಯ ಮನವಿ ಮಾಡಿದ್ದರು.

Share Post