BengaluruPolitics

ಇನ್ನೂ 25 ನಾಯಕರು ಕಾಂಗ್ರೆಸ್‌ಗೆ ಬರ್ತಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಬಿಜೆಪಿ ಹಾಗೂ ಜೆಡಿಎಸ್‌ನಿಂದ ಇನ್ನೂ 25 ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನೆಲಮಂಗಲದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್‌ ಈ ಬಾರಿ 141 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಈ ಬಾರಿ 60 ಸ್ಥಾನಗಳಿಗೆ ಸೀಮಿತವಾಗಲಿದೆ. ಜೆಡಿಎಸ್‌ 24 ಸೀಟುಗಳಿಂದ ಹೆಚ್ಚು ಗಳಿಸೋದಕ್ಕೆ ಆಗೋದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈಗಾಗಲೇ ಲಕ್ಷ್ಮಣ ಸವದಿ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್‌ ಸೇರಿದ್ದಾರೆ. ಇನ್ನೂ ಹಲವಾರು ನಾಯಕರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post