ಬೆಂಗಳೂರಲ್ಲಿ ಮತ್ತೊಂದು ಬೆಂಕಿ ಅವಘಡ; ಶೂ, ಬಟ್ಟೆ ಮಳಿಗೆ ಭಸ್ಮ!
ಬೆಂಗಳೂರು; ಬೆಂಗಳೂರಿನಲ್ಲಿ ಅಗ್ನಿ ಅವಘಡಗಳು ನಡೆಯುತ್ತಲೇ ಇವೆ. ಇದಕ್ಕೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ ರಾತ್ರಿ ಚಿಕ್ಕಜಾಲದಲ್ಲಿರುವ ಮಳಿಗೆ ಬೆಂಕಿಗೆ ಆಹುತಿಯಾಗಿದೆ.
ಶೂ ಹಾಗೂ ಬಟ್ಟೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಮಳಿಗೆ ಹೊತ್ತಿ ಉರಿದಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ರವಾನಿಸಲಾಯಿತು. ಆದ್ರೆ, ಅಷ್ಟೊತ್ತಿಗಾಗಲೇ ಬಹುತೇಕ ಸುಟ್ಟು ಭಸ್ಮವಾಗಿತ್ತು. ಜಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.