BengaluruPolitics

ಜುಲೈ 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ; ಹೇಗೆ ಅರ್ಜಿ ಸಲ್ಲಿಸೋದು..?

ಬೆಂಗಳೂರು; ಮನೆಯೊಡತಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 14ರಿಂದ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ವಿಶೇಷ ಮೊಬೈಲ್‌ ಆಪ್ಲಿಕೇಷನ್‌ ಸಿದ್ದವಾಗಿದೆ. ಜೊತೆ ಸೇವಾ ಸಿಂಧು ವೆಬ್‌ಸೈಟ್‌ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಸಂಬಂಧ ಚರ್ಚೆಯಾಗಿದೆ. ಜುಲೈ 14ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾದ ಮೇಲೆ ಯಾವುದೇ ತೊಂದರೆಯಾಗಬಾರದು ಅನ್ನೋ ಕಾರಣಕ್ಕೆ ಈ ಪ್ರಕ್ರಿಯೆ ತಡ ಮಾಡಿದ್ದೇವೆ. ಇನ್ನ ಮೇಲೆ ಎಲ್ಲವೂ ಸುಸೂತ್ರವಾಗಿ ನಡೆಯಲಿವೆ ಎಂದು ಸಚಿವರು ಹೇಳಿದರು.

Share Post