ನಾಳೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ; ನೋ ಡೆಡ್ಲೈನ್ – ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು; ನಾಳೆಯಿಂದ ಆನ್ಲೈನ್ ಹಾಗೂ ಆಫ್ ಲೈನ್ ಮೂಲಕ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದ್ರೆ ಇದಕ್ಕೆ ಯಾವುದೇ ಕಾಲಮಿತಿ ಇಲ್ಲ. ಯಾವಾಗ ಬೇಕಾದರೂ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರ ಅವರು, ಈ ಮಾಹಿತಿ ನೀಡಿದರು.
ಸೇವಾ ಸಿಂಧು ವೆಬ್ಸೈಟ್, ಬೆಂಗಳೂರು ವನ್, ಗ್ರಾಮ ವನ್ ಕೇಂದ್ರಗಳಿಂದ ಅರ್ಜಿ ಸಲ್ಲಿಸಬಹುದು. ಆನ್ ಲೈನ್, ಆಫ್ ಲೈನ್ ಎರಡೂ ರೀತಿಯಲ್ಲೂ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವ ಮಹಿಳೆಯ ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ವಿವರ ನೀಡಬೇಕು. ಜೊತೆಗೆ ಬ್ಯಾಂಕ್ ಖಾತೆಯ ವಿವರ ನೀಡಬೇಕು. ಒಂದು ವೇಳೆ ಗಂಡ ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಅರ್ಜಿ ರಿಜೆಕ್ಟ್ ಆಗಲಿದೆ. ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ಈ ಯೋಜನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.