ಪಿಎಸ್ಐ ಅಕ್ರಮ- ಯಾರನ್ನೂ ಬಿಡುವುದಿಲ್ಲ – ಜ್ಞಾನೇಂದ್ರ
ಬೆಂಗಳೂರು; ಪಿಎಸ್ ಐ ಅಕ್ರಮ ನೇಮಕಾತಿ ಹಗರಣದಲ್ಲಿ ಎಷ್ಟೇ ದೊಡ್ಡವರಿದ್ದರೂ ಅವರನ್ನು ಬಿಡುವುದಿಲ್ಲ. ನಮ್ಮ ಸರ್ಕಾರ ಸೂಕ್ತ ತನಿಖೆಗೆ ಅವಕಾಶ ಕೊಟ್ಟಿದ್ದು, ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಡೆಸಿದವರು ಹಾಗೂ ಹಣ ಕೊಟ್ಟವರು ಇಬ್ಬರನ್ನೂ ಬಂಧಿಸಲಾಗಿದೆ. ನಾವು ಹೇಳಿದಂತೆ ನಡೆದುಕೊಂಡಿದ್ದೇವೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಆದ ನೇಮಕಾತಿಗಳ ವೇಳೆ ನಡೆದ ಅಕ್ರಮಗಳ ಬಗ್ಗೆ ಸರಿಯಾಗಿ ತನಿಖೆಯಾಗಿಲ್ಲ ಎಂದರು.