ನಾಳೆಯಿಂದ ಶಾಲೆಗಳು ಆರಂಭ, ಭದ್ರತೆ ಹೆಚ್ಚಳ; ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯಾದ್ಯಂತ ಫ್ರೌಡ ಶಾಲೆಗಳು ಆರಂಭಗೊಳ್ಳುವ ಹಿನ್ನೆಲೆ, ಪೊಲೀಸರು ಹೈ ಅಲರ್ಟ್ ಆಗಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆಯಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕಲ್ಪಿಸಿ ಹೈ ಅಲರ್ಟ್ ಘೋಷಿಸಲಾಗಿದೆ.
ಎಲ್ಲ ಪೊಲೀಸ್ ವರಿಷ್ಠಾಧಿಕಾರಿಗಳುಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಭಂಗವಾಗದಂತೆ ಮತ್ತು ವಿವಾದಗಳು ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.