BengaluruCrime

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಕೊಲೆಗಡುಕರನ್ನು ಮಟ್ಟ ಹಾಕುತ್ತೇವೆ – ಆರಗ ಜ್ಞಾನೇಂದ್ರ

ಬೆಂಗಳೂರು; ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಸಮಾಜದ ಮುಂದೆ ಮಂಡಿಸಲಿ. ಅದು ಬಿಟ್ಟು ಹತ್ಯೆ ಮಾಡುವುದು, ರಕ್ತದ ಕೋಡಿ ಹರಿಸುವುದು ಸರಿಯಲ್ಲ. ಅಂಥವರನ್ನು ನಾವು ಮಟ್ಟ ಹಾಕುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನದ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಅವರು ಮಾತನಾಡಿದರು. 

ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವುದು ದುರಾದೃಷ್ಟಕರ ಸಂಗತಿ. ಒಬ್ಬ ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಕೊಲೆಯಾಗಿದ್ದಾನೆ. ಬೈಕ್‍ನಲ್ಲಿ ಬಂದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಪ್ರವೀಣ್ ಕೇರಳದ ಗಡಿಯಲ್ಲಿದ್ದರು. ಹೀಗಾಗಿ ಕೇರಳ ಸರ್ಕಾರದ ಜೊತೆಗೂ ನಮ್ಮ ಪೊಲೀಸರು ಮಾತನಾಡಿದ್ದಾರೆ. ಅಲ್ಲೂ ಕಾರ್ಯಾಚರಣೆ ನಡೆಯುತ್ತಿದೆ. ಒಬ್ಬ ಯುವಕನ ಕೊಲೆಯಾಗಿರುವುದರಿಂದ ಆ ಭಾಗದ ಜನರು ಕೂಡ ಆತಂಕಕ್ಕೊಳಗಾಗಿದ್ದಾರೆ. ನಾನು, ಸಿಎಂ ರಾತ್ರಿಯೇ ಪೊಲೀಸರ ಜೊತೆ ಮಾತಾಡಿದ್ದೇವೆ. ಅಗತ್ಯ ಸೂಚನೆ ನೀಡಿದ್ದೇವೆ. ಇದೀಗ ಪೊಲೀಸರು ಕೊಲೆಗಡುಕರ ಬೆನ್ನಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

 

Share Post