Bengaluru

ಇಂದಿನಿಂದ 2 ದಿನಗಳ ಕಾಲ ಅರುಣ್‌ ಸಿಂಗ್‌ ರಾಜ್ಯ ಪ್ರವಾಸ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 27ರಂದು ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರುವ ಅವರು  ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು  ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುತ್ತಾರೆಂಬ ಮಾಹಿತಿ ಲಭ್ಯವಾಗಿದೆ.  28ರಂದು ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ವಿವಿಧ ಬೈಠಕ್‍ಗಳಲ್ಲಿ ಅವರು ಭಾಗವಹಿಸಲಿದ್ದಾರೆ. 29ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿ,  ಆ ದಿನವೇ ರಾತ್ರಿ 9.35 ಕ್ಕೆ ಬೆಂಗಳೂರು ವಿಮಾನನಿಲ್ದಾಣದಿಂದ ದೆಹಲಿಗೆ ವಾಪಸ್‌ ಆಗ್ತಾರೆ.

Share Post