BengaluruPolitics

ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಕನಿಷ್ಠ 10 ಸ್ಥಾನ; ಡಿ.ಕೆ.ಶಿವಕುಮಾರ್‌

ಮಂಗಳೂರು; ಕರಾವಳಿ ಭಾಗದಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೈಂದೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಈ ಭಾಗದಲ್ಲಿ ಹಿಂದುತ್ವದ ತಂತ್ರ ಫಲ ನೀಡೋದಿಲ್ಲ. ಈ ಚುನಾವಣೆ ಭಾವನೆ ಹಾಗೂ ಬದುಕಿನ ನಡುವಣ ಚುನಾವಣೆ. ಬಿಜೆಪಿ ಭಾವನೆಗಳ ಮೇಲೆ ಚುನಾವಣೆ ಮಾಡಿದರೆ, ನಾವು ಬದುಕಿನ ಮೇಲೆ ಚುನಾವಣೆ ಮಾಡುತ್ತೇವೆ. ಅವರು ಭ್ರಷ್ಟಾಚಾರ ನಿರ್ಮೂಲನೆಗೆ ನಾವು ಪಣ ತೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಬೊಮ್ಮಾಯಿ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದ್ದಾರೆ ಹೊರತು, ಇಡೀ ಸಮುದಾಯ ಉದ್ದೇಶಿಸಿ ಹೇಳಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರಾದ ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್, ಕೆಂಪಣ್ಣ ಅವರು ಹೇಳಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಯಾರು ಮುಚ್ಚಿ ಹಾಕಲು ಸಾಧ್ಯವಿಲ್ಲ. ರಾಜ್ಯದಲ್ಲಿ 40% ಕಮಿಷನ್, ಪಿ ಎಸ್ ಐ ಸೇರಿದಂತೆ ನೇಮಕಾತಿ ಹಗರಣ, ವಿವಿ ಉಪಕುಲಪತಿ ನೇಮಕಕ್ಕೆ ಹಣ ಪಡೆದಿರುವುದು ನಮ್ಮ ಕಾಲದಲ್ಲಿ ಆಗಿದೆಯಾ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ಸಿದ್ದರಾಮಯ್ಯ ಸರ್ಕಾರದ ವಿಚಾರ ಮಾತನಾಡಿದ್ದು, ಸಮುದಾಯದ ವಿಚಾರ ಮಾತನಾಡಿಲ್ಲ’ ಎಂದು ತಿಳಿಸಿದರು.

ಈ ಬಾರಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದೆಯೆ ಎಂಬ ಪ್ರಶ್ನೆಗೆ, ‘ಬಿಜೆಪಿ ಆಣೆಕಟ್ಟು ಒಡೆದಿದೆ. ಕೇವಲ ಲಿಂಗಾಯತ ಸಮುದಾಯ ಮಾತ್ರವಲ್ಲ, ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ನೀಡಲಾಗುವುದು. ಹೊರಗಡೆ ಇರುವ ಎಲ್ಲ ಮತದಾರರು ತಮ್ಮ ಊರಿಗೆ ಬಂದು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

Share Post