Bengaluru

ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ; ಆನೇಕಲ್‌ನಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ಕೃತ್ಯ

ಆನೇಕಲ್(ANEKAL): ಬೆಂಗಳೂರಿನ ಆನೇಕಲ್‌ನಲ್ಲಿ ಹಾಡಹಗಲೇ ಭೀಕರ ಕೊಲೆ ಯತ್ನ (ATTEMPT TO MURDER) ನಡೆದಿದೆ. ದುಷ್ಕರ್ಮಿಗಳು ಯುವಕನೊಬ್ಬ ಅಟ್ಟಾಡಿಸಿ, ಮಚ್ಚು ಲಾಂಗುಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಕಾಳಿದಾಳ ಎಂಬಾತನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅತ್ತಿಬೆಲೆ ಪೊಲೀಸ್‌ ಠಾಣಾ ವ್ಯಾಪ್ತಿಯ ಬಳಗಾರನಹಳ್ಳಿ ಗ್ರಾಮದಲ್ಲಿ ಈ ಕೃತ್ಯ ಎಸಗಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅತ್ತಿ ಬೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post