ಶಾಸಕ ಹರೀಶ್ ಪೂಜಾಗೆ ಬೆದರಿಕೆ ಪ್ರಕರಣ; ಸಿಐಡಿಗೆ ವಹಿಸಿದ ಸರ್ಕಾರ
ಮಂಗಳೂರು; ಮಂಗಳೂರು ಬಳಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದೆ.
ಫರಂಗಿಪೇಟೆ ಬಳಿ ಶಾಸಕ ಹರೀಶ್ ಪೂಂಜಾರ ಕಾರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಿಸಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಶಾಸಕರ ಕಾರು ಚಾಲಕ ನವೀನ್ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು, ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಈ ಬಗ್ಗೆ ಮಾತನಾಡಿದ್ದಾರೆ. ಇದು ಕೊಲೆ ಯತ್ನ ಪ್ರಕರಣವೆಂದು ಕಾಣುತ್ತಿಲ್ಲ. ಓವರ್ ಟೇಕ್ ಮಾಡುವ ವಿಚಾರದಲ್ಲಿ ನಡೆದಿರುವ ಘಟನೆ ಎಂದು ಹೇಳಿದ್ದಾರೆ. ಆರೋಪಿಯ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ, ಜೊತೆಗೆ ರಿಯಾಜ್ ವಿರುದ್ಧ ಯಾವುದೇ ಗುರುತರ ಆರೋಪಗಳಿಲ್ಲ ಎಂದು ಹೇಳಿದ್ದಾರೆ.