ಹುಬ್ಬಳ್ಳಿಯಲ್ಲಿ ಅಯೋಧ್ಯೆ ಕೇಸ್‌ಗೆ ಮರುಜೀವ ಹಿನ್ನೆಲೆ; ನಾಳೆ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ಕರೆ
ಬೆಂಗಳೂರು; ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದಿನ ಅಯೋಧ್ಯೆ ಕೇಸ್‌ಗೆ ಮರುಜೀವ ನೀಡಲಾಗಿದೆ. ಹಿಂದೂಪರ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧಿಸಲಾಗಿದೆ. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಿಂದೂ ಕಾರ್ಯಕರ್ತನ ಬಂಧನ ವಿರೋಧಿ ಬಿಜೆಪಿ ವತಿಯಿಂದ ನಾಳೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರೆ ನೀಡಲಾಗಿದೆ
ಇದು ಸುಮಾರು 31 ವರ್ಷದ ಹಳೆಯ ಪ್ರಕರಣ. ಅಅಂದು ಹೋರಾಟ ಮಾಡಿದವರು ಈಗ ವೃದ್ಧರಾಗಿದ್ದಾರೆ. ಅಂತಹವರನ್ನು ಈಗ ಬಂಧಿಸಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ. ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ. ಜೊತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆಗೆ ಕರೆ ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ನಾಳೆ ಹುಬ್ಬಳ್ಳಿಗೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಭೇಟಿ ನೀಡುತ್ತಿದ್ದು, ಹಿಂದೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.