ಆಜಾನ್ ವಿವಾದ; ಸುಪ್ರೀಂ ಆದೇಶ ಪಾಲಿಸಲು ಸಿಎಂ ಬೊಮ್ಮಾಯಿ ಕರೆ
ಬೆಂಗಳೂರು; ರಾಜ್ಯದಲ್ಲಿ ಆಜಾನ್ ವಿವಾದ ತೀವ್ರಗೊಂಡಿರುವ ವೇಳೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಇದೆ. ಆ ಆದೇಶವನ್ನು ಎಲ್ಲರೂ ಪಾಲನೆ ಮಾಡಲೇಬೇಕಾಗುತ್ತದೆ. ಈ ವಿಷಯ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಏನೇನು ಆಗುತ್ತಿದೆ. ಬೇರೆ ರಾಜ್ಯಗಳಲ್ಲಿ ಏನು ಆಗುತ್ತಿದೆ ಎಂಬುದರ ಬಗ್ಗೆ ನಾವು ಗಮನಿಸುತ್ತಿದ್ದೇವೆ ಎಂದು ಹೇಳಿದರು.
ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಈ ಸಂಬಂಧ ಸಂಜೆಯ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.