ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ತರಾಟೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದುದನ್ನು ನೋಡಿದ ಶಿಕ್ಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೀವನ್ಭಿಮಾನಗರ ಠಾಣೆ ವ್ಯಾಪ್ತಿಯ ಅಮರಜ್ಯೋತಿ ನಗರದಲ್ಲಿ ನಡೆದಿದೆ. ಇಲ್ಲಿ ಪೇಯಿಂಗ್ ಗೆಸ್ಟ್ ನಲ್ಲಿ ವಾಸವಿದ್ದ ಭವ್ಯಾ ಎಂಬ ಬಿಕಾಂ ವಿದ್ಯಾರ್ಥಿನಿ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ಭವ್ಯಾ ಕೋರಮಂಗಲದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿಳು. ಭವ್ಯಾ ಪರೀಕ್ಷೆ ಬರೆಯುವಾಗ ನಕಲು ಮಾಡುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ಶಿಕ್ಷಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಡಿಬಾರ್ ಮಾಡಿದ್ದರೆಂದು ಹೇಳಲಾಗುತ್ತಿದೆ. ಇದರಿಂದ ನೊಂದು ಭವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನನ್ನು ಪರೀಕ್ಷೆಯಿಂದ ಡಿಬಾರ್ ಮಾಡಿದ್ದಾರೆ. ನಾನು ಬದುಕಲ್ಲ, ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಡೆತ್ನೋಟ್ ಕೂಡಾ ಬರೆದಿಟ್ಟಿದ್ದಾಳೆಂದು ತಿಳಿದುಬಂದಿದೆ.