Bengaluru

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ಹಿನ್ನೆಲೆ; ರಾಜ್ಯಗಳಿಗೆ ಮತಪೆಟ್ಟಿಗೆ ರವಾನೆ

ಬೆಂಗಳೂರು; ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಅದಕ್ಕಾಗಿ ಕೇಂದ್ರ ಚುಣಾವಣಾ ಆಯೋಗ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮತದಾನಕ್ಕೆ ಅವಶ್ಯಕವಾದ ಸಾಮಗ್ರಿಗಳನ್ನು ಈಗಾಗಲೇ ಆಯಾ ರಾಜ್ಯಗಳಿಗೆ ರವಾನಿಸಲಾಗುತ್ತಿದೆ. ಮತ ಪೆಟ್ಟಿಗೆಗಳು, ಇಂಕ್‌, ಮತ್ತಿತರೆ ವಸ್ತುಗಳನ್ನು ಎಲ್ಲಾ ರಾಜ್ಯಗಳೂ ಕಳುಹಿಸಲಾಗಿದೆ. ಬೆಂಗಳೂರಿಗೂ ಇಂದು ರಾತ್ರಿ ಆಗಮಿಸಲಿವೆ.

ಕರ್ನಾಟಕದ ರಾಜ್ಯದ ಬ್ಯಾಲೆಟ್ ಜರ್ನಿಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ವಹಿಸಿದ್ದು, ಇಂದು ಸಂಜೆ ನವದೆಹಲಿಯಿಂದ ನಿರ್ಗಮಿಸಿ ರಾತ್ರಿ 8:15 ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಈ ವಿಶೇಷ ಬ್ಯಾಲೆಟ್ ಜರ್ನಿಯ ಮುಖಾಂತರ ರಾಜ್ಯಕ್ಕೆ ಆಗಮಿಸುವ ಮತದಾನದ ಸಾಮಾಗ್ರಿಗಳನ್ನು ವಿಧಾನಸೌಧದ ಕೊಠಡಿ ಸಂಖ್ಯೆ 108 ರಲ್ಲಿ (Strong Room) ಭದ್ರವಾಗಿ ಇಡಲಾಗುತ್ತದೆ.

ಇಂದು ರಾತ್ರಿ 9 ಗಂಟೆಗೆ ವಿಧಾನಸೌಧ ತಲುಪಲಿರುವ ಈ ವಿಶೇಷ ಬ್ಯಾಲೆಟ್ ಜರ್ನಿಯನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಸಹಾಯಕ ಚುನಾವಣಾಧಿಕಾರಿ ಶ್ರೀಮತಿ ವಿಶಾಲಾಕ್ಷಿ ಅವರು ಸ್ವಾಗತಿಸಲಿದ್ದಾರೆ.

 

Share Post