ಡಿಸೆಂಬರ್ 31ರಿಂದ ಬೆಂಗಳೂರಲ್ಲಿ ಶುರುವಾಗುತ್ತೆ ʻಕಸʼವಿಸಿ..!
ಬೆಂಗಳೂರು: ಬಿಬಿಎಂಪಿ ಹಲವು ತಿಂಗಳಿಂದ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಕಸ ಸಂಗ್ರಹಣೆಯನ್ನು ಡಿಸೆಂಬರ್ ೩೧ರಿಂದ ಸ್ಥಗಿತಗೊಳಿಸಲು ಗುತ್ತಿಗೆದಾರರು ತೀರ್ಮಾನಿಸಿದ್ದಾರೆ. ಡಿಸೆಂಬರ್ ೩೧ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಅಂದೇ ನಾವೂ ಪ್ರತಿಭಟನೆ ಮಾಡುತ್ತೇವೆ ಎಂದು ಕಸ ವಿಲೇವಾರಿ ಗುತ್ತಿಗೆದಾರರು ಹೇಳಿದ್ದಾರೆ.
ಹಲವು ತಿಂಗಳಿನಿಂದ ಕಸ ವಿಲೇವಾರಿ ಮಾಡುವ ಗುತ್ತಿಗೆದಾರರ ಬಿಲ್ ಪಾವತಿಯಾಗಿಲ್ಲವಂತೆ. ಆದ್ದರಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಸ ವಿಲೇವಾರಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಾಲ ಸುಬ್ರಮಣ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. ನಮ್ಮ ಬೇಡಿಕೆ ಈಡೇರುವ ತನಕ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಬೆಂಗಳೂರಿಗರು, ಹೊಸ ವರ್ಷದಲ್ಲಿ ಕಸ ವಿಲೇವಾರಿಯಾಗದೆ ಪರದಾಡಬೇಕಾದ ಅನಿವಾರ್ಯತೆ ಎದುರಾಗಬಹುದು.