BengaluruPolitics

ಆರ್‌ಎಸ್‌ಎಸ್‌ ಬ್ಯಾನ್‌ ಮಾಡಬೇಕು ಅನ್ನೋದು ಅರ್ಥಹೀನ; ಸಿಎಂ ಬೊಮ್ಮಾಯಿ

ಬೆಂಗಳೂರು; ಆರ್‌ಎಸ್‌ಎಸ್‌ ಹತ್ತು ಹಲವಾರು ಸಂಸ್ಥೆಗಳನ್ನು ಕಟ್ಟಿ ಬಡವರಿಗೆ ಅನುಕೂಲ ಮಾಡಿಕೊಡುತ್ತಿದೆ. ಅದನ್ನು ಬ್ಯಾನ್‌ ಮಾಡಬೇಕು ಎಂಬುದು ಅರ್ಥಹೀನ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರದ್ದು ಬೆಕ್ಕಿನ ಕಣ್ಣಲ್ಲಿ ಇಲಿ ಅನ್ನೋ ನಡೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಪಿಎಫ್‌ಐ ಮೇಲಿನ ಕೇಸ್‌ಗಳನ್ನು ವಾಪಸ್‌ ಪಡೆದಿದ್ದಾರೆ. ಸಿದ್ದರಾಮಯ್ಯ ನಡೆ ಏನು ಎಂಬುದಕ್ಕೆ ಇದೇ ಸಾಕ್ಷಿ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ಪಿಎಫ್‌ಐ ನಿಷೇಧ ಮಾಡಿರುವುದಕ್ಕೆ ಪ್ರತಿಕ್ರಿಯೆ  ನೀಡಿದ್ದ ಸಿದ್ದರಾಮಯ್ಯ ಅವರು, ಸಮಾಜ ಹಾಳು ಮಾಡುತ್ತಿರುವ ಆರ್‌ಎಸ್‌ಎಸ್‌ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Share Post