ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಯ ಬರ್ಬರ ಹತ್ಯೆ
ಬೆಂಗಳೂರು; ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ನಿನ್ನೆ ಕಾಲೇಜು ಫೆಸ್ಟ್ ನಡೆದಿತ್ತು. ಈ ವೇಳೆ ಜಗಳ ನಡೆದಿತ್ತು. ಈ ಜಗಳವೇ ಕೊಲೆಗೆ ಕಾರಣ ಎಂದು ಶಂಕಸಲಾಗಿದೆ. ಹದಿನೆಂಟು ವರ್ಷದ ಅರ್ಬಾಜ್ ಕೊಲೆಯಾದ ವಿದ್ಯಾರ್ಥಿಯಾಗಿದ್ದಾನೆ. ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.