Bengaluru

ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಬೆಂಗಳೂರು; ನಿನ್ನೆಯಷ್ಟೇ ಪರಿಷತ್‌ ಸಭಾಪತಿ ಹಾಗೂ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಸವರಾಜ ಹೊರಟ್ಟಿಯವರು, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಹೊರಟ್ಟಿಯವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಹೂಗಚ್ಛ ಹಾಗೂ ಪಕ್ಷದ ಬಾವುಟ ನೀಡಿ ಬೊಮ್ಮಾಯಿಯವರು ಹೊರಟ್ಟಿಯವರನ್ನು ಬಿಜೆಪಿಗೆ ಬರಮಾಡಿಕೊಂಡರು. ಇದನ್ನು ಬೊಮ್ಮಾಯಿಯವರೇ ಟ್ವಟಿರ್‌ಗಳನ್ನು ಖಚಿತಪಡಿಸಿದ್ದು, ಅದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಮಾಜಿ ವಿಧಾನ ಪರಿಷತ್ ಸಭಾಪತಿ, ಜೆಡಿಎಸ್‌ ಪಕ್ಷದ ಹಿರಿಯ ನಾಯಕರಾದ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದರು. ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು’ ಎಂದು ಬರೆದುಕೊಂಡಿದ್ದಾರೆ.

ಈ ಸಂದರ್ಭಧಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ‌, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಆರ್‌. ಅಶೋಕ್ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

 

Share Post