Bengaluru

ಬಿಬಿಎಂಪಿ ಆಯುಕ್ತ ಗೌರವ್‌ ಗುಪ್ತ ವರ್ಗಾವಣೆ; ಖಾಲಿಯಾದ ಸ್ಥಾನಕ್ಕೆ ತುಷಾರ್‌ ಗಿರಿನಾಥ್‌

ಬೆಂಗಳೂರು: ಕಳೆದ ಒಂದು ವರ್ಷದಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಕೊರೊನಾ ಸೇರಿದಂತೆ ಹಲವು ವಿಚಾರಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಗೌರವ್‌ ಗುಪ್ತರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ತುಷಾರ್‌ ಗಿರಿನಾಥ್‌ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಗೌರವ್‌ ಗುಪ್ತ ಅವರು ಬಿಬಿಎಂಪಿ ಆಡಳಿತಾಧಿಕಾರಿಯಾಗಿ 2020ರ ಸೆ.12ರಂದು ಅಧಿಕಾರ ಸ್ವೀಕರಿಸಿದ್ದರು. ನಂತರ 2021ರ ಏಪ್ರಿಲ್ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಗೌರವ್‌ ಗುಪ್ತ ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಇವರ ಜೊತೆಗೆ ಇನ್ನೂ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

Share Post