ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಆತ್ಮಹತ್ಯೆ
ಬೆಂಗಳೂರು; ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಸುದರ್ಶನ್ ಶೆಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಹಿಂದೆ ಹನುಮಂತನಗರ ಠಾಣೆ ಪಿಎಸ್‌ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ಸೈಬರ್ ಕ್ರೈಂ ಠಾಣೆಗೆ ನಿಯೋಜನೆ ಮೇರೆಗೆ ವರ್ಗಾವಣೆ ಮಾಡಲಾಗಿತ್ತು. ಆದ್ರೆ ಅವರು ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಸುದರ್ಶನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ಕೂಡಾ ನಿಯೋಜನೆಗೊಂಡಿದ್ದರು. ಆದ್ರೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದಲ್ಲಿರುವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.