Bengaluru

ನಾಳೆಯಿಂದ ಒಂದು ವಾರ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು!

ಬೆಂಗಳೂರು; ನೀವು ಬೆಂಗಳೂರು-ಮಂಗಳೂರು ನಡುವೆ ರೈಲು ಪ್ರಯಾಣಕ್ಕೆ ಸಿದ್ಧರಾಗಿದ್ದೀರಾ…? ಹಾಗಾದರೆ ನಿಮಗೆ ಇದು ನಿರಾಸೆ ಸುದ್ದಿ. ಯಾಕಂದ್ರೆ ನಾಳೆಯಿಂದ ಒಂದು ವಾರದ ಕಾಲ ಈ ಮಾರ್ಗದಲ್ಲಿ ಸಂಚಾರ ಇರೋದಿಲ್ಲ. ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು ಮಾಡಲಾಗಿದೆ. ಡಿಸೆಂಬರ್‌ 18ರವರೆಗೆ ಪ್ರತಿದಿನ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಸಾಧ್ಯವಿಲ್ಲ.

ಯಾವ್ಯಾಯ ರೈಲುಗಳು ರದ್ದುಗೊಂಡಿವೆ..?

ಬೆಂಗಳೂರು-ಕಣ್ಣೂರು-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್
ಬೆಂಗಳೂರು-ಕಾರವಾರ-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್
ಯಶವಂತಪುರ-ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ
ಯಶವಂತಪುರ-ಕಾರವಾರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್‌ಪ್ರೆಸ್

ಯಶವಂತಪುರ-ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) – ಡಿಸೆಂಬರ್ 16 ರಂದು ರದ್ದು
ಮಂಗಳೂರು ಜಂಕ್ಷನ್-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) – ಡಿಸೆಂಬರ್ 17 ರಂದು ರದ್ದು

Share Post