BengaluruPolitics

ಭದ್ರಾ ಯೋಜನೆ ರಾಷ್ಟ್ರೀಯ ಯೋಜನೆ ಅಲ್ಲ ಎನ್ನುತ್ತಿದೆ ಕೇಂದ್ರ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ 5300 ಕೋಟಿ ರೂಪಾಯಿ ಮೀಸಲಿಟ್ಟಿತ್ತು. ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಅಂತ ಘೋಷಣೆ ಮಾಡಲಾಗಿತ್ತು. ಆದ್ರೆ ಈಗ ಕೇಂದ್ರ ಸರ್ಕಾರ ಬೇರೆಯದನ್ನೇ ಹೇಳುತ್ತಿದೆ. ಅದು ರಾಷ್ಟ್ರೀಯ ಯೋಜನೆ ಅಲ್ಲ ಎಂದು ಹೇಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೇಂದ್ರ ಸರ್ಕಾರವೇ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ಈಗ ಇಲ್ಲ ಎನ್ನುತ್ತಿದೆ. ಈಗ ನಾವೇನು ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ/

ಭದ್ರಾ ಮೇಲ್ದಂಡೆ ಯೋಜನೆಗಾಗಿ ಜಲಸಂಪನ್ಮೂಲ ಇಲಾಖೆಯಲ್ಲಿ 600 ಕೋಟಿ ರೂಪಾಯಿಯಷ್ಟೇ ಇದೆ. ಆದರೆ 1 ಕೋಟಿ 25 ಲಕ್ಷ ರೂಪಾಯಿ ಕೆಲಸ ಮಂಜೂರು ಆಗಿದೆ ಎಂದೂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Share Post