BengaluruCrime

BIG BREAKING; ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ; ಎಡಿಜಿಪಿ ಅಮೃತ್‌ ಪಾಲ್‌ ಅರೆಸ್ಟ್‌

ಬೆಂಗಳೂರು; ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಿಐಡಿ ಅಧಿಕಾರಿಗಳು ಹಿರಿಯ ಪೊಲೀಸ್‌ ಅಧಿಕಾರಿಯನ್ನು ಬಲೆಗೆ ಬೀಳಿಸಿದ್ದಾರೆ. ಈ ಕೇಸ್‌ನಲ್ಲಿ ವಿಚಾರಣೆ ಎದುರಿಸುತ್ತಿದ್ದ ಎಡಿಜಿಪಿ ಅಮೃತ್‌ ಪಾಲ್‌ ಅವರನ್ನು ಇಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ.

ಅಮೃತ್‌ ಪಾಲ್‌ ಅವರು ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. 545 ಪಿಎಸ್‌ಐ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ನಡೆದಿತ್ತು. ಈ ಅಕ್ರಮಕ್ಕೆ ಅಮೃತ್‌ ಪಾಲ್‌ ಕೂಡಾ ಸಾಥ್‌ ನೀಡಿದ್ದಾರೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ಬಾರಿ ಅಮೃತ್‌ ಪಾಲ್‌ರನ್ನು ಸಿಐಡಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ನಾಲ್ಕನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾಗ ಅವರನ್ನು ಬಂಧಿಸಲಾಗಿದೆ..

ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಡಿಜಿಪಿ ಶ್ರೇಣಿಯ ಅಧಿಕಾರಿಯನ್ನು ಬಂಧಿಸಲಾಗಿದೆ. ಇಂದೇ ಅವರನ್ನು ಕೋರ್ಟ್‌ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಕ್ರಮ ಕೇಳಿಬಂದ ಮೇಲೆ ಅಮೃತ್‌ ಪಾಲ್‌ ಅವರನ್ನು ಆಂತರಿಕ ಭದ್ರತಾ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅಮೃತ್‌ ಪಾಲ್‌ ಅವರ ಕಚೇರಿಯಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಒಎಂಆರ್‌ ಶೀಟ್‌ ತಿದ್ದಲಾಗಿತ್ತು. ಖಚಿತ ಸಾಕ್ಷ್ಯಗಳು ಸಿಕ್ಕಿದ್ದರಿಂದಲೇ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಎಡಿಜಿಪಿ ಅಮೃತ್‌ ಪಾಲ್‌ ಬಂಧನದಿಂದಾಗಿ ದೊಡ್ಡ ದೊಡ್ಡವರಿಗೆಲ್ಲಾ ನಡುಕ ಶುರುವಾಗಿದೆ.

 

Share Post