ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್; ಡಿನೋಟಿಫಿಕೇಷನ್ ಪ್ರಕರಣ ರದ್ದು
ಬೆಂಗಳೂರು; ಮಾಜಿ ಸಿಎಂ ಯಡಿಯೂರಪ್ಪ ಅವರು ದೊಡ್ಡ ಕಾನೂನು ಕಂಟಕದಿಂದ ಪಾರಾಗಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ದಾಖಲಾಗಿತ್ತು. ಆ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದ್ದು, ಯಡಿಯೂರಪ್ಪ ನಿರಾಳರಾಗಿದ್ದಾರೆ.
2006-07ರಲ್ಲಿ ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಈ ವೇಳೆಯಲ್ಲಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಕಾನೂನು ಗಾಳಿಗೆ ತೂರಿ ಎಂಟು ಎಕರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಅನಂತರ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿತ್ತು. ಅದರಂತೆ ಲೋಕಾಯುಕ್ತರು 2015ರ ಫೆಬ್ರವರಿ 21ರಂದು ಎಫ್ಐಆರ್ ದಾಖಲಿಸಿ ತನಿಖೆ ಶುರು ಮಾಡಿದ್ದರು. ಆದ್ರೆ ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿರಲಿಲ್ಲ. ಇನ್ನು ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹೀಗಾಗಿ ಈ ಕೇಸನ್ನೂ ರದ್ದು ಮಾಡಬೇಕೆಂದು ಯಡಿಯೂರಪ್ಪ ಅವರು ಕೋರ್ಟ್ ಮರೆ ಹೋಗಿದ್ದರು. ಕೋರ್ಟ್ ಯಡಿಯೂರಪ್ಪ ಅವರ ಮನವಿಯನ್ನು ಪುರಸ್ಕರಿಸಿದೆ.