Bengaluru

ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ; ಚಾಲಕರಿಗೆ ಚಿನ್ನದ ಪದಕ ಪ್ರದಾನ

ಬೆಂಗಳೂರು; ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಇದುವರೆಗೆ 100 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಬಾಂಕ್ವೆಟ್‌ ಹಾಲ್‌ನಲ್ಲಿ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ವೇಳೆ ಅಪಘಾತ  ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share Post