ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು; ಮೂವರು ಆರೋಪಿಗಳ ಮನೆ ಮೇಲೆ ಎಸ್‌ಐಟಿ ದಾಳಿ
ಬೆಂಗಳೂರು; ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಟ್ ಕಾಯಿನ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಹಗರಣವನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆಗಾಗಿ ಇತ್ತೀಚೆಗಷ್ಟೇ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿತ್ತು. ಈ ವಿಶೇಷ ತನಿಖಾ ತಂಡ ತನಿಖೆ ಚುರುಕುಗೊಳಿಸಿದೆ. ಇಂದು ಪ್ರಕರಣದ ಮೂವರು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಶ್ರೀಕಿಯ ಜಯನಗರದ ನಿವಾಸದ ಮೇಲೆ ದಾಳಿ ಮಾಡಿ ಶೋಧಕಾರ್ಯ ನಡೆಸಲಾಗಿದೆ. ಇನ್ನು ಸುನಿಶ್ ಹೆಗ್ಡೆ, ಪ್ರಸಿದ್ಧ್ ಎಂಬುವವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಇವರಿಬ್ಬರ ಮನೆಗಳ ಸದಾಶಿವನಗರದಲ್ಲಿದ್ದು, ಮನೆಯಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ವಿಶೇಷ ತನಿಖಾ ತಂಡ ಕೋರ್ಟ್‌ನಿಂದ ಸರ್ಚ್ ವಾರಂಟ್ ತಂದು ಈ ಶೋಧ ನಡೆಸಲಾಗುತ್ತಿದೆ.