ಬಿಟ್ ಕಾಯಿನ್ ಪ್ರಕರಣ ಮರು ತನಿಖೆಗೆ ಆದೇಶ; ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು; ಬಿಟ್ ಕಾಯಿನ್ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಲಕ್ಷಾಂತರ ಕೋಟಿ ರೂಪಾಯಿ ವ್ಯವಹಾರ ನಡೆದಿದೆ. ಆದ್ರೆ ಬಿಜೆಪಿ ಸರ್ಕಾರದಲ್ಲಿ ಈ ಪ್ರಕರಣ ಮುಚ್ಚಿಹಾಕಲಾಗಿತ್ತು. ಈಗ ಅದನ್ನು ಮರುತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.
ಬಿಟ್ ಕಾಯಿನ್ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ಸಿಐಡಿ ಅಡಿಯಲ್ಲಿ ಎಸ್‌ಐಟಿ ರಚನೆ ಮಾಡಲಾಗಿದೆ. ಇದಕ್ಕೆ ಅಂತಾರಾಷ್ಟ್ರೀಯ ಲಿಂಕ್ ಇದೆ. ಹೀಗಾಗಿ ಇಷ್ಟೇ ಅವಧಿಯಲ್ಲಿ ತನಿಖೆ ಮುಗಿಸಲಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಆದ್ರೆ ಸೂಕ್ತ ತನಿಖೆ ನಡೆಸಿ, ಸತ್ಯ ಬಯಲಿಗೆ ತರುತ್ತೇವೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.