BengaluruPolitics

ಆಪರೇಷನ್ ಹಸ್ತ‌ ಸಾಧ್ಯತೆ; ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೆಲ ಬಿಜೆಪಿ ಶಾಸಕರು ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆಪರೇಷನ್ ಹಸ್ತದ ಮುನ್ಸೂಚನೆ ಸಿಗುತ್ತಿದ್ದಂತೆ ಬಿಜೆಪಿ ನಾಯಕರು ಎಚ್ಚೆತ್ತಿದ್ದಾರೆ.

ರಾಜ್ಯದ ಇಂದಿನ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಾಗುತ್ತಿದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಪಕ್ಷ ಬಿಡಲು ಮುಂದಾಗಿರುವ ಶಾಸಕರ ಮನವೊಲಿಸುವುದು, ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸುವುದು ಸೇರಿದಂತೆ ಹಲವು ವಿಚಾರಗಳ‌ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

Share Post