ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ; ಬಿಗಿ ಭದ್ರತೆ
ದೊಡ್ಡಬಳ್ಳಾಪುರ; ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನಸ್ಪಂದನ ಸಮಾವೇಶ ನಡೆಯುತ್ತಿದೆ. ಬೆಳಗ್ಗೆ 11.30ಕ್ಕೆ ಬಿಜೆಪಿ ನಾಯಕರು ಮತ್ತು ಸಚಿವರ ಭಾಷಣ ಆರಂಭವಾಗಲಿದೆ. ಮಧ್ಯಾಹ್ನ 12.50ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭಾಷಣ ಮಾಡಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಭಾಷಣ ಮಾಡಲಿದ್ದು, ಸಮಾವೇಶದ ಕೊನೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಷಣ ಮಾಡಲಿದ್ದಾರೆ.
ಸಮಾವೇಶಕ್ಕೆ ತೆರಳುವ ಮುನ್ನ ಸಿಎಂ ಬೊಮ್ಮಾಯಿ ದೇವರ ಮೊರೆ ಹೋಗಿದ್ದರು. ಬೆಂಗಳೂರಿನ ಪ್ಯಾಲೇಸ್ ರೋಡ್ನಲ್ಲಿರುವ ಭಗವಾನ್ ಶ್ರೀ ಮಾರುತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ದಾಖಲೆ ಮಟ್ಟದಲ್ಲಿ ವಿಜಯ ಸಾಧಿಸ್ತೇವೆ. ಇದರ ಪ್ರಯುಕ್ತ ಇಂದು ಜನಸ್ಪಂದನ ಸಮಾವೇಶ ಮಾಡ್ತಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ಈಗಾಗಲೇ ಸಾಕಷ್ಟು ಯೋಜನೆಗಳನ್ನು ಮಾಡಿದ್ದೇವೆ. ಆ ಯೋಜನೆಗಳ ಅನುಷ್ಠಾನದ ಕುರಿತು ಹೇಳಲಾಗುತ್ತದೆ ಎಂದು ಹೇಳಿದರು.