BengaluruPolitics

ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರುವ ವಿಚಾರ; ಯಾವಾಗ ಏನು ಬೇಕಾದರೂ ಆಗಬಹುದು ಎಂದ ಡಿಕೆಶಿ

ಬೆಂಗಳೂರು; ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್‌ ಸೇರುತ್ತಾರೆಂಬ ಸುದ್ದಿಗಳು ಕೆಲ ದಿನಗಳಿಂದ ಹರಿದಾಡುತ್ತಿವೆ. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಎಸ್‌.ಟಿ.ಸೋಮಶೇಖರ್‌ ಕಾಂಗ್ರೆಸ್‌ ಸೇರುವ ಹಾಗಿದ್ದರೆ ಸೇರಿಸಿಕೊಳ್ಳಿ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ. ಕೆಲ ಕಾರ್ಯಕರ್ತರು ಈ ನಿಟ್ಟಿನಲ್ಲಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಆದ್ರೆ ಆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ ಎಂದು ಹೇಳಿದ್ದಾರೆ.

  ಲೋಕಸಭಾ ಚುನಾವಣೆಯಲ್ಲಿ ವೋಟ್‌ ಶೇರ್‌ ಜಾಸ್ತಿ ಮಾಡಿಕೊಳ್ಳಲು ನಮ್ಮ ಕಾರ್ಯಕರ್ತರಿಗೆ ಹೇಳಿದ್ದೇವೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಸೋಮಶೇಖರ್‌ ಪಕ್ಷ ಸೇರ್ಪಡೆ ಬಗ್ಗೆ ನಮ್ಮ ಕೆಲ ನಾಯಕರು ವೈಯಕ್ತಿಕವಾಗಿ ಹೇಳಿರಬಹುದು. ಆದ್ರೆ ಆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. 

  ಇನ್ನು ಇದೇ ವೇಳೆ ಅವರು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದು, ಅವರ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಮೈಸೂರಿನಲ್ಲಿ ಮಾತನಾಡಿರುವ ಚಲುವರಾಯಸ್ವಾಮಿಯವರು ಬಿಜೆಪಿಯ ಹತ್ತರಿಂದ ಹದಿನೈದು ಶಾಸಕರು ಹಾಗೂ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದಿದ್ದಾರೆ. ಈ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿರುವುದು ರಾಜಕೀಯವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

 

Share Post