ಬಿಜೆಪಿ ಸಂಸದ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ; ಯುವತಿ ವಿರುದ್ಧ ಪ್ರತಿದೂರು
ಬೆಂಗಳೂರು; ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಯುವತಿಯೊಬ್ಬಳು ವಂಚನೆ ಆರೋಪ ಮಾಡಿ ದೂರು ನೀಡಿದ್ದಾಳೆ. ದೇವೇಂದ್ರಪ್ಪ ಪುತ್ರ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕ ರಂಗನಾಥ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಪ್ರೀತಿಯ ನಾಟಕವಾಡಿ ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ ಆರೋಪ ಮಾಡಿದ್ದಾಳೆ.
ಬೆಂಗಳೂರು ಮೂಲದ ಯುವತಿ ರಂಗನಾಥ್ ವಿರುದ್ಧ ದೂರು ದಾಖಲಿಸಿದ್ದಾಳೆ. ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ. ಒಂದೂವರೆ ವರ್ಷದ ಹಿಂದೆ ಪಾರ್ಟಿಯೊಂದರಲ್ಲಿ ರಂಗನಾಥ್ ಪರಿಚಯವಾಗಿದ್ದರು. ನಂತರ ಮೈಸೂರಿನ ಹೋಟೆಲ್ ಒಂದರಲ್ಲಿ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ರೆ ಈಗ ಮದುವೆಯಾಗೋದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಇನ್ನೊಂದೆಡೆ ರಂಗನಾಥ್ ಕೂಡಾ ಯುವತಿ ವಿರುದ್ಧ ಬ್ಲ್ಯಾಕ್‌ಮೇಲ್ ದೂರು ದಾಖಲಿಸಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. 15 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದೂ ಆರೋಪಿಸಲಾಗಿದೆ. ಬೆಂಗಳೂರು ಮೂಲದ ಯುವತಿ ಹಾಗೂ ಶ್ರೀನಿವಾಸ್ ಎನ್ನುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.