BengaluruPolitics

ರಾಜ್ಯ ಸರ್ಕಾರದ 100 ವೈಫಲ್ಯಗಳ ಚಾರ್ಜ್‌ಶೀಟ್‌ ರಿಲೀಸ್‌ ಮಾಡಿದ ಬಿಜೆಪಿ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಭ್ರಮಿಸುತ್ತಿದೆ. ಆದ್ರೆ, ಬಿಜೆಪಿ ಮಾತ್ರ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿದೆ. ಇಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ 100 ವೈಫಲ್ಯಗಳ ಚಾರ್ಜ್‌ಶೀಟ್‌ ರಿಲೀಸ್‌ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಸರ್ಕಾರದ 100 ವೈಫಲ್ಯಗಳ ಒಳಗೊಂಡ ಒಂದು ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ದಿಕ್ಕು ತಪ್ಪಿದೆ. ಎಲ್ಲಾ ತೆರಿಗೆ ಹೆಚ್ಚಿಸಿದ್ದು, ಜೊತೆಗೆ ಎಂಟು ಸಾವಿರ ಕೋಟಿ ರೂಪಾಯಿ ಸಾಲ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಲ ಮತ್ತು ತೆರಿಗೆ ಮೂಲಕ 45 ಸಾವಿರ ಕೋಟಿ ಆದಾಯ ಇದ್ದರೂ 12 ಸಾವಿರ ಕೋಟಿ ರೂ. ಖೋತಾ ಬಜೆಟ್ ಮಂಡಿಸಿದ್ದಾರೆ ಎಂದು ಆಪಾದನೆ ಮಾಡಿದರು.

Share Post