ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ಇವುಗಳ ನಡುವಿನ ವ್ಯತ್ಯಾಸ ತಿಳಿಯಿರಿ..!:ಸಿದ್ದುಗೆ ರಾಜ್ಯ ಬಿಜೆಪಿ ಘಟಕ ಟಾಂಗ್
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಮಾಡಿದೆ.ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲ, ಅಲ್ವೇ ಸಿದ್ದರಾಮಯ್ಯ? ಹಿಜಾಬ್ ವಿಚಾರದಲ್ಲಿ ಹಿಜಾಬ್ ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದರು, ನ್ಯಾಯಾಲಯ ಇವರ ಹೇಳಿಕೆಗೆ ವಿರುದ್ಧವಾದ ತೀರ್ಪು ನೀಡಿತು. ರಾಷ್ಟ್ರಧ್ವಜವೇ ಇರದ ಸ್ಥಂಭದಲ್ಲಿ ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂಬ ಸುಳ್ಳು ಹೇಳಿದರು.
ಮಾನ್ಯ ಸಿದ್ದರಾಮಯ್ಯನವರೇ, ಓಲೈಕೆಗೂ ಒಂದು ಮಿತಿ ಎನ್ನುವುದಿರುತ್ತದೆ. ನೀವು ಅದೆಲ್ಲವನ್ನೂ ದಾಟಿ ಸಾಗುತ್ತಿದ್ದೀರಿ. ಮೊದಲನೆಯದಾಗಿ ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ಇವುಗಳ ನಡುವಿನ ವ್ಯತ್ಯಾಸವನ್ನು ಮೊದಲು ಅರಿತುಕೊಳ್ಳಿ. ಹಿಜಾಬ್ ನಿಷೇಧಿಸಿಲ್ಲ, ತರಗತಿಯೊಳಗೆ ಹಿಜಾಬ್‌ಗೆ ಅವಕಾಶ ನಿರಾಕರಿಸಲಾಗಿದೆ, ಅಷ್ಟೇ.
ಹಿಜಾಬ್‌ಗೆ ಎಲ್ಲಿ ವಿರೋಧ ವ್ಯಕ್ತವಾಗಿದೆ ಎನ್ನುವುದರ ಬಗ್ಗೆಯೇ @siddaramaiah ಅವರಿಗೆ ಗೊಂದಲವಿದೆ. ಹಾದಿಬೀದಿಯಲ್ಲಿ, ಕಾಲೇಜಿನ ಆವರಣದಲ್ಲಿ ಹಿಜಾಬ್ ನಿಷೇಧಿಸಿಲ್ಲ. ವಸ್ತ್ರಸಂಹಿತೆಯ ಪ್ರಕಾರ ತರಗತಿಯಲ್ಲಿ ಅವಕಾಶ ನೀಡಿಲ್ಲ. ಹಿಜಾಬ್ ಒಳಗೆ ಅಡಗಿರುವ ʼಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
ಮಾನ್ಯ ಸಿದ್ದರಾಮಯ್ಯನವರೇ,
ಓಲೈಕೆಗೂ ಒಂದು ಮಿತಿ ಎನ್ನುವುದಿರುತ್ತದೆ. ನೀವು ಅದೆಲ್ಲವನ್ನೂ ದಾಟಿ ಸಾಗುತ್ತಿದ್ದೀರಿ.
ಮೊದಲನೆಯದಾಗಿ ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ಇವುಗಳ ನಡುವಿನ ವ್ಯತ್ಯಾಸವನ್ನು ಮೊದಲು ಅರಿತುಕೊಳ್ಳಿ.
ಹಿಜಾಬ್ ನಿಷೇಧಿಸಿಲ್ಲ, ತರಗತಿಯೊಳಗೆ ಹಿಜಾಬ್‌ಗೆ ಅವಕಾಶ ನಿರಾಕರಿಸಲಾಗಿದೆ, ಅಷ್ಟೇ.#ಬುರುಡೆರಾಮಯ್ಯ pic.twitter.com/nSQTdPpX4m
— BJP Karnataka (@BJP4Karnataka) March 25, 2022