BengaluruPolitics

ರಾಜ್ಯದಲ್ಲಿ ಬಿಜೆಪಿ 140 ಸ್ಥಾನ ಗೆಲ್ಲಲು ಶ್ರಮಿಸುತ್ತೇವೆ; ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು; ಯಾವುದೇ ಸ್ಥಾನಮಾನ ನಾನು ಅಪೇಕ್ಷೆ ಪಟ್ಟಿರಲಿಲ್ಲ. ಆದರೆ ಹೈಕಮಾಂಡ್‌ ನನ್ನನ್ನು ನಂಬಿ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಆಯ್ಕೆ ಮಾಡಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಜವಾಬ್ದಾರಿಯನ್ನು ವಿನಮ್ರತೆಯಿಂದ ಸ್ವೀಕರಿಸಿ ರಾಜ್ಯದಲ್ಲಿ ಓಡಾಡುತ್ತೇನೆ. ಎಲ್ಲಾ ಮುಖಂಡರು ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಎಲ್ಲರೂ ಸೇರಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ ಇದೇ ವೇಳೆ ಕರೆಕೊಟ್ಟರು.

Share Post