BengaluruPolitics

ಬಿಎಸ್‌ವೈ ಮನೆ ಮೇಲೆ ಕಲ್ಲು ಹೊಡೆದಿದ್ದು ಬಿಜೆಪಿ ಆಂತರಿಕ ಕುತಂತ್ರ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಸಿಎಂ ಮನೆ ಮೇಲೆ ಕಲ್ಲು ಹೊಡೆದಿದ್ದರೆ ಒಪ್ಪಬಹುದಿತ್ತು. ಆದ್ರೆ ಯಡಿಯೂರಪ್ಪ ಅವರು ಮಾಜಿ ಸಿಎಂ. ಅವರ ಮನೆ ಮೇಲೆ ಕಲ್ಲು ಹೊಡೆದಿದ್ದಾರೆ. ಇದು ಬಿಜೆಪಿಯಲ್ಲಿನ ಆಂತರಿಕ ಕುತಂತ್ರದಿಂದ ನಡೆದಿರುವ ಕೃತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಬಂಜಾರಾ ಸಮುದಾಯದವರು ಒಳಮೀಸಲಾತಿ ವಿರೋಧಿಸಿ ಶಿಕಾರಿಪುರದ ಯಡಿಯೂರಪ್ಪ ಮನೆ ಮೇಲೆ ಕಲ್ಲು ಹೊಡೆದಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕುತಂತ್ರವೇ ಇದಕ್ಕೆ ಕಾರಣ ಎಂದು ಆಪಾದಿಸಿದರು.

ಮೀಸಲಾತಿ ವಿಚಾರದಲ್ಲಿ ಸಿಎಂ ಬೊಮ್ಮಾಯಿಯವರು ಗೊಂದಲ ಸೃಷ್ಟಿ ಮಾಡಿದ್ದಾರೆ. ಹೀಗಾಗಿಯೇ ಕೇಂದ್ರದ ನಾಯಕರು ಮತ್ತೆ ಯಡಿಯೂರಪ್ಪರನ್ನು ಹೊಗಳುತ್ತಿದ್ದಾರೆ. ಹೀಗಿರುವಾಗಲೇ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿಯಾಗಿದೆ. ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಬೇಕು ಅನ್ನೋ ಕಾರಣಕ್ಕೆ ಅವರ ಪಕ್ಷದಲ್ಲೇ ಆಂತರಿಕ ಕುತಂತ್ರ ನಡೆಯುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದರು. ಇನ್ನು ಅಲ್ಪಸಂಖ್ಯಾತರಿಗೆ ಮೀಸಲಾತಿ ಇಲ್ಲದಂತೆ ಮಾಡಿರುವುದರ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಇದನ್ನು ನಾವು ವಿರೋಧಿಸುತ್ತೇವೆ. ಅಲ್ಪಸಂಖ್ಯಾತರಿಗೆ ಮೀಸಲಾತಿ೯ ಬದಲಾವಣೆ ಮಾಡಬಾರದು. ಇದು ನಮ್ಮ ಒತ್ತಾಯ ಹಾಗೂ ಬೇಡಿಕೆ ಎಂದು ಹೇಳಿದರು.

Share Post