BengaluruPolitics

ಇಂದು ರಾತ್ರಿ ಬಿಜೆಪಿ ಮೂರನೇ ಪಟ್ಟಿ; ಶೆಟ್ಟರ್‌ಗೆ ಸಿಗುತ್ತಾ ಟಿಕೆಟ್‌..?

ಬೆಂಗಳೂರು; ಬಿಜೆಪಿ ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಇನ್ನು 12 ಕೇತ್ರಗಳಿಗಷ್ಟೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ನಡುವೆ ಬಿಜೆಪಿಯಲ್ಲಿ ಭಿನ್ನಮತ ದೊಡ್ಡ ಮಟ್ಟದಲ್ಲಿ ಭುಗಿಲೆದ್ದಿದೆ. ಹೀಗಿರುವಾಗಲೇ ಬಿಜೆಪಿ ಹೈಕಮಾಂಡ್‌ ಮೂರನೇ ಪಟ್ಟಿ ಕೂಡಾ ಸಿದ್ಧ ಮಾಡಿದೆ ಎಂದು ಹೇಳಲಾಗುತ್ತಿದೆ. ಇಂದು ರಾತ್ರಿ ಬಿಜೆಪಿ 12ಕ್ಷೇತ್ರಗಳ ಮೂರನೇ ಪಟ್ಟಿ ರಿಲೀಸ್‌ ಮಾಡಲಿದೆ ಎಂದು ತಿಳಿದುಬಂದಿದೆ.

ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿತ್ತು. ನಂತರ ಕಳೆದ ರಾತ್ರಿ 23 ಕ್ಷೇತ್ರಗಳಿಗೆ ಟಿಕೆಟ್‌ ನೀಡಲಾಗಿದೆ. ಇನ್ನು 12 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಬಾಕಿ ಇದೆ. ಈಗಾಗಲೇ ಘೋಷಣೆಯಾಗಿರುವ ಕ್ಷೇತ್ರಗಳಲ್ಲಿ ಟಿಕೆಟ್‌ ಸಿಗದವರು ಬಂಡಾಯವೇಳುತ್ತಿದ್ದಾರೆ. ಹೀಗಿದ್ದರೂ ಮೂರನೇ ಪಟ್ಟಿಯಲ್ಲೂ ಅಚ್ಚರಿಯ ಹೆಸರುಗಳಿರುತ್ತವೆ ಎಂದು ಹೇಳಲಾಗುತ್ತಿದೆ. ಸ್ವತಃ ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರೇ ಈ ಮಾತನ್ನು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಮೂರನೇ ಪಟ್ಟಿ ಮೇಲೆ ಎಲ್ಲರ ಕಣ್ಣೂ ನೆಟ್ಟಿದೆ. ಇನ್ನು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಇನ್ನೂ ಟಿಕೆಟ್‌ ಘೋಷಣೆಯಾಗಿಲ್ಲ. ಮೂರನೇ ಪಟ್ಟಿಯಲ್ಲಾದರೂ ಅವರಿಗೆ ಟಿಕೆಟ್‌ ಸಿಗುತ್ತಾ ನೋಡಬೇಕು.

Share Post